ನಾಳೆ ತೆರೆಗೆ ಬರುತ್ತಿದೆ ಝೈದ್ ಖಾನ್ ಅಭಿನಯದ ಬನಾರಸ್ ಚಿತ್ರ

ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದು ಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಬೇರೆ ರಾಜ್ಯಗಳ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದರೂ ಝೈದ್ ಖಾನ್ ಸೋನಲ್ ಜೊತೆಗೂಡಿ ವಾರಾಣಸಿಗೆ ತೆರಳಿ ಸ್ವತಃ ಗಂಗಾರತಿಯಲ್ಲಿ ಪಾಲ್ಗೊಂಡು ಗಂಗಾ ಮಾತೆಗೆ ನಮಿಸಿದ್ದಾರೆ.ಝೈದ್ ಖಾನ್ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಬಿಡುವಿರದೆ ಸುತ್ತಿದ್ದಾರೆ. ಎಲ್ಲವೂ ಸಾರ್ಥಕ್ಯ […]