ಬೆಂಗಳೂರಲ್ಲಿ ಆಭರಣ ಅಂಗಡಿಗಳ ಮೇಲೆ ಐಟಿ ದಾಳಿ

ಬೆಂಗಳೂರು,ಜ.31- ತೆರಿಗೆ ವಂಚನೆ ಹಿನ್ನಲೆಯಲ್ಲಿ ಪ್ರಮುಖ 25ಕ್ಕೂ ಹೆಚ್ಚು ಆಭರಣ ಮಾಲೀಕರ ಅಂಗಡಿ ಮತ್ತು ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಚಿಕ್ಕಪೇಟೆ, ಜಯನಗರ, ಯಶವಂತಪುರ, ಬಸವನಗುಡಿ ಸೇರಿದಂತೆ 25ಕ್ಕೂ ಹೆಚ್ಚು ಕಡೆ ದಾಳಿ ನಡೆಸಿರುವ ಅಧಿಕಾರಿಗಳು ತೆರಿಗೆ ವಂಚನೆ ಆರೋಪದ ಮೇಲೆ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬನಶಂಕರಿಯಲ್ಲಿರುವ ಪಾಶ್ರ್ವ ಫಾರ್ಮಾಸ್ಯುಟಿಕಲ್ ಮಾಲೀಕರಾಗಿರುವ ರಾಜೇಶ್ಕುಮಾರ್ ಜೈನ್ ಅವರ ಅಂಗಡಿ ಹಾಗೂ ಜಯನಗರದ ಮನೆ ಮೇಲೆ 15ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಏಕಾಏಕಿ […]

ಮತ್ತೊಮ್ಮೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು,ಡಿ.7- ಶೀಘ್ರದಲ್ಲೇ ಸಿಲಿಕಾನ್ ಸಿಟಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಗಮನವಾಗಲಿದೆ.ಸಧ್ಯದಲ್ಲೇ ಉದ್ಘಾಟನೆಗೊಳ್ಳಲಿರುವ ಮೆಟ್ರೋ ಎರಡನೇ ಹಂತದ ರೈಲು ಯೋಜನೆಗೆ ಮೋದಿ ಅವರು ಹಸಿರು ನಿಶಾನೆ ತೋರಿಸಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ. ವೈಟ್ ಫೀಲ್ಡನಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಮಾರ್ಗದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರೈಲು ಮಾರ್ಗವನ್ನು ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ನಾಳಿನ ಗುಜರಾತ್, ಹಿಮಾಚಲ ಪ್ರದೇಶ ರಾಜ್ಯ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಮೋದಿ ಅವರ ಚಿತ್ತ ಮುಂದಿನ ದಿನಗಳಲ್ಲಿ ನಡೆಯಲಿರುವ ಕರ್ನಾಟಕದ […]

ಬೆಂಗಳೂರಿನಲ್ಲಿ ಡಿ.8ರಿಂದ 10ರವರೆಗೆ ಫ್ಯೂಚರ್ ಡಿಸೈನ್ ಸಮಾವೇಶ

ಬೆಂಗಳೂರು, ಡಿ.3- ಫ್ಯೂಚರ್ ಡಿಸೈನ್ ಸಮಾವೇಶವು ಡಿ.8ರಿಂದ 10ರ ವರೆಗೆ ನಗರದ ಅಶೋಕ ಹೋಟೆಲ್‍ನಲ್ಲಿ ನಡೆಯಲಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ. ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸಲಿದ್ದಾರೆ. ಈಗಾಗಲೇ ನ.11ರಿಂದ ನಡೆಯುತ್ತಿರುವ ಬೆಂಗಳೂರು ಡಿಸೈನ್ ಫೆಸ್ಟಿವಲ್ ಹಿನ್ನೆಲೆಯಲ್ಲಿ ಈ ಮಹತ್ವದ ಸಮಾವೇಶ ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರವು ಏರ್ಪಡಿಸಿರುವ ಸಮಾವೇಶಕ್ಕೆ ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಮಿತಿ, ಭಾರತೀಯ ವಿನ್ಯಾಸಗಾರರ ಒಕ್ಕೂಟ, ಸಿಐಐ ಮತ್ತು ಜೈನ್ […]