ಬೆಂಗಳೂರಿನಲ್ಲಿ ದುಪ್ಪಟ್ಟಾಯ್ತು ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ

ಬೆಂಗಳೂರು, ಜ.7- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರ ಜತೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ನಗರದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ದ್ವಿಗುಣಗೊಂಡಿದೆ. ಡಿ.29ರಂದು 33 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರೆ, ನಿನ್ನೆ 124 ಸೋಂಕಿತರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊರೊನಾ ಮತ್ತು ಓಮಿಕ್ರಾನ್ ಸಂಖ್ಯೆ ಹೆಚ್ಚಳವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಸಣ್ಣ ಸಣ್ಣ ಲಕ್ಷಣಗಳು ಕಂಡುಬಂದರೂ ಆಸ್ಪತ್ರೆಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ನೆಗಡಿ, ಕೆಮ್ಮು, ಜ್ವರ ಎಂದು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಶೇ.20ರಷ್ಟು […]