ಬೆಂಗಳೂರು ಸೇಫ್ ಸಿಟಿ : ಕಮಲ್ ಪಂಥ್

ಬೆಂಗಳೂರು,ಜ.7- ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ಉದ್ಯಾನನಗರಿ ಬೆಂಗಳೂರನ್ನು ಸೇಫ್ ಸಿಟಿಯನ್ನಾಗಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಅಪರಾಧ ಪ್ರಕರಣಗಳು ಹಾಗೂ ಪತ್ತೆಯಾಗಿರುವ ಕಳವು ಪ್ರಕರಣಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಪರಾಧ ಪ್ರಕರಣಗಳ ನಿಯಂತ್ರಣದ ಬಗ್ಗೆ ವಿವರಣೆ ನೀಡಿದರು. ಸರಗಳ್ಳತನ, ಡಕಾಯಿತಿ, ಕೊಲೆ, ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲಾಗಿದೆ. ಈ ಹಿಂದೆ ರೌಡಿಗಳು ಆಯಾ ಪ್ರದೇಶದ ಚೌಕಟ್ಟನ್ನು ವಿಧಿಸಿಕೊಂಡು ಪಾರುಪತ್ಯ ಸಾಧಿಸುತ್ತಿದ್ದರು. ಮಚ್ಚು , ಲಾಂಗ್ […]