ಬೆಂಗಳೂರಿನಲ್ಲಿ 10 ದಿನಗಳಲ್ಲಿ 309 ಮಂದಿ ಕೊರೊನಾಗೆ ಬಲಿ
ಬೆಂಗಳೂರು,ಜ.28- ಮೂರನೆ ಅಲೆ ಆರಂಭದಲ್ಲಿ ಕೊರೊನಾ ಅಬ್ಬರಿಸಿದ್ದರೂ ಸಾವಿನ ಪ್ರಕರಣಗಳು ಹೆಚ್ಚಿರಲಿಲ್ಲ. ಹೀಗಾಗಿ ಜನ ಆತಂಕಕ್ಕೆ ಒಳಗಾಗಿರಲಿಲ್ಲ. ಆದರೆ, ಇತ್ತೀಚಿನ ವರದಿಗಳನ್ನು ಗಮನಿಸಿದರೆ ಸೋಂಕಿನ ಜತೆಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಭೀತಿ ಹುಟ್ಟಿಸಿದೆ. ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿದ್ದರೂ ಸಾವಿನ ಪ್ರಕರಣಗಳು ಹೆಚ್ಚುತ್ತಲೆ ಇರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕಿತರ ಆರೋಗ್ಯದ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ 10 ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿರುವುದರಿಂದ ಪ್ರತಿಯೊಬ್ಬರೂ […]