ಇಟ್ಟಿಗೆಯಿಂದ ತಲೆ ಚಚ್ಚಿ ನಡು ರಸ್ತೆಯಲ್ಲೇ ವ್ಯಕ್ತಿಯ ಭೀಕರ ಹತ್ಯೆ

ಬೆಂಗಳೂರು, ಫೆ.25- ದುಷ್ಕರ್ಮಿಗಳು ಸಿಮೆಂಟ್ ಇಟ್ಟಿಗೆಯಿಂದ ವ್ಯಕ್ತಿಯೊಬ್ಬರ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಕಾಮಾಕ್ಷಿಪಾಳ್ಯದ ಬಸ್ ನಿಲ್ದಾಣ ಸಮೀಪದ ಫುಟ್‍ಪಾತ್‍ನಲ್ಲಿ ದುಷ್ಕರ್ಮಿಗಳು ತಡರಾತ್ರಿ ವ್ಯಕ್ತಿಯ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ಈ ಮಾರ್ಗದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಕೊಲೆಯಾದ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ. ನಂತರ ಆ […]