ಬೆಂಗಳೂರು-ಮೈಸೂರು ದಶಪಥ ಕಾಮಗಾರಿ ಮುಗಿದ ಬಳಿಕವೇ ಲೋಕಾರ್ಪಣೆ : ಸಿಎಂ

ಬೆಂಗಳೂರು,ಜ.5- ರಾಜಧಾನಿ ಬೆಂಗಳೂರು ಮತ್ತು ಮೈಸೂರು ನಡುವೆ ಸಂಪರ್ಕ ಕಲ್ಪಿಸುವ ದಶಪಥ ರಸ್ತೆಯನ್ನು ಆತುರವಾಗಿ ಉದ್ಘಾಟಿಸದೆ ಕಾಮಗಾರಿ ಪೂರ್ಣಗೊಂಡ ಬಳಿಕವೇ ಲೋಕಾರ್ಪಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆ ದ್ದಾರಿ ಸಚಿವ ನೀತಿ ಗಡ್ಕರಿ ಅವರೊಂದಿಗೆ […]