ರಸ್ತೆ ಸುಧಾರಣೆಗೆ ಮಾ.31ರ ಗಡುವು, ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ತರಾಟೆ

ಬೆಂಗಳೂರು,ಜ.2- ನಗರದಲ್ಲಿ ಭಾರೀ ಮಳೆಯಿಂದಾಗಿ ಗುಂಡಿ ಬಿದ್ದಿದ್ದ ರಸ್ತೆಗಳನ್ನು ಮಾ.31ರೊಳಗೆ ಮುಚ್ಚಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡದಿದ್ದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಮಳೆಗಾಲ ಮುಗಿದು ತಿಂಗಳು ಕಳೆದರೂ ನಗರದ ಅನೇಕ ಪ್ರಮುಖ ರಸ್ತೆಗಳಲ್ಲೇ ಗುಂಡಿ ಬಿದ್ದಿವೆ. ಇದರಿಂದ ಸಾರ್ವಜನಿಕರು ಇಡೀ ಶಾಪ ಹಾಕುತ್ತಿದ್ದಾರೆ. ಇದನ್ನು ಮುಚ್ಚಲು ನಿಮಗೆ ಸಮಸ್ಯೆಯಾದರು ಏನು ಎಂದು ಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಂಗಳೂರು ಅಭಿವೃದ್ಧಿ ಕುರಿತಂತೆ […]