ಪಬ್, ಸಿನಿಮಾ, ಹೊಟೇಲ್ 50-50, ವೀಕೆಂಡ್ ಲಾಕ್‍ಡೌನ್?

ಬೆಂಗಳೂರು,ಜ.4- ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಬೇಕೆ ? ಬೇಡವೇ ಎಂಬುದು ಇಂದು ಸಂಜೆ ನಡೆಯಲಿರುವ ಮಹತ್ವದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ. ಶನಿವಾರ-ಭಾನುವಾರ ವಾರಾಂತ್ಯದ ಲಾಕ್‍ಡೌನ್, ಈಗಿರುವ ಕಫ್ರ್ಯೂ ಸಮಯವನ್ನು ವಿಸ್ತರಿಸುವುದು ಹಾಗೂ ರಾಜ್ಯದ ಗಡಿಭಾಗಗಳಲ್ಲಿ ಹೆಚ್ಚಿನ ಬಿಗಿ ಕ್ರಮ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕದೆ ಒಂದಿಷ್ಟು ಕಠಿಣ ನಿಯಮಗಳನ್ನು ರೂಪಿಸುವುದು ಸೇರಿದಂತೆ ಎಲ್ಲಾ ಸಾಧ್ಯ ಸಾಧ್ಯತೆಗಳನ್ನು ಸರ್ಕಾರ ಮುಕ್ತವಾಗಿಟ್ಟುಕೊಂಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ […]