“ಬಾರಿಸು ಕನ್ನಡ ಡಿಂಡಿಮವ” ಸಾಂಸ್ಕೃತಿಕ ಉತ್ಸವ ಉದ್ಘಾಟಿಸಲಿದ್ದಾರೆ ಮೋದಿ

ಬೆಂಗಳೂರು,ಫೆ.24- ರಾಷ್ಟ್ರ ರಾಜಧಾನಿ ನವದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ನಾಳೆಯಿಂದ ಎರಡು ದಿನಗಳ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿಯವರ ಏಕ ಭಾರತ ಶ್ರೇಷ್ಠ ಭಾರತದ ಆಶಯಕ್ಕೆ ಅನುಗುಣವಾಗಿ ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಉದ್ಘಾಟಿಸಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ […]