ನಮ್ಮ ಸಮಾಜದ ದನಿ ಸರ್ಕಾರಕ್ಕೆ ಮುಟ್ಟಿದೆ : ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ,ಡಿ.29- ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ಇದ್ದು, ಎಲ್ಲರ ಚಿತ್ತ ಸಿಎಂ ಸಚಿವ ಸಂಪುಟದತ್ತ ಇದೆ ಎಂದು ಕೂಡಲ ಸಂಗಮ ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ನಡೆದ ಹೋರಾಟ ಬೆಳಗಾವಿಯಲ್ಲಿ ಬಂದು ನಿಂತಿದೆ. ನಮ್ಮ ಸಮಾಜದ ಧ್ವನಿ ಸರ್ಕಾರಕ್ಕೆ ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿಜಯಪುರ ಶಾಸಕ […]

“ಸ್ವಾರ್ಥಕ್ಕಾಗಿ ಸಮಾಜ ಒಡೆಯಬೇಡಿ ನಿರಾಣಿ ಅವರೇ”

ಬೆಂಗಳೂರು,ಜ.22- ನಿಮ್ಮ ಸ್ವಾರ್ಥ ಸಾಧನೆಗಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ನೀವು ಎಂಎಲ್ಸಿ, ಶಾಸಕ, ಸಚಿವ ಅಥವಾ ಸಿಎಂ ಆಗಬೇಕೆಂದು ಜಿಲ್ಲೆ, ತಾಲ್ಲೂಕು, ಗ್ರಾಮಪಂಚಾಯ್ತಿಗೊಂದು ಪೀಠ ಮಾಡಿಕೊಳ್ಳಿ. ನಾನು ಬೇಡ ಎನ್ನುವುದಿಲ್ಲ. ಆದರೆ, ನಿಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ದುರ್ಬಳಕೆ ಮಾಡಿಕೊಂಡರೆ ಸರಿ ಇರುವುದಿಲ್ಲ ಎಂದು ಸ್ವಾಮೀಜಿಗಳು ಬಹಿರಂಗವಾಗಿ […]