ಮಾ.24ಕ್ಕೆ ಬಸವಣ್ಣ-ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು,ಮಾ.9- ವಿಧಾನ ಸೌಧದ ಮುಂದೆ ನೂತನವಾಗಿ ನಿರ್ಮಾಣಗೊಂಡಿರುವ ಕಾಯಕಯೋಗಿ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳು ಇದೇ 24ರಂದು ಅನಾವರಣಗೊಳ್ಳಲಿದೆ. ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಅಂದು ಎರಡು ಪ್ರತಿಮೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಉದ್ಘಾಟನೆ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದರೆ ನಂತರ ಆಯೋಗದ ಅನುಮತಿ ಪಡೆದು ಉದ್ಘಾಟಿಸಬೇಕಾಗುತ್ತದೆ. ಅದಕ್ಕೂ ಮೊದಲೇ ಸಿದ್ದಗೊಂಡಿರುವ […]

ವಿಧಾನಸೌಧ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಂಗಳೂರು,ಜ.13- ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ಬಹುನಿರೀಕ್ಷಿತ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಯವರ ಪ್ರತಿಮೆ ಪಕ್ಕ ಸುಮಾರು 8 ಕೋಟಿ ವೆಚ್ಚದಲ್ಲಿ ಸರ್ಕಾರ ಈ ಪ್ರತಿಮೆಗಳನ್ನು ನಿರ್ಮಾಣ ಮಾಡುತ್ತಿದ್ದು, ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಪ್ರತಿಮೆಗಳನ್ನು ಉದ್ಘಾಟಿಸುವ ಲೆಕ್ಕಾಚಾರದಲ್ಲಿ ಸರ್ಕಾರವಿದೆ. ಕಳೆದ ತಿಂಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಿದ್ದರು. […]

ವಿಧಾನಸೌಧದೆದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಜ.13 ರಂದು ಶಂಕುಸ್ಥಾಪನೆ

ಬೆಂಗಳೂರು,ಜ.10- ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಇದೇ 13ರಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಈ ಎರಡೂ ಪ್ರತಿಮೆಗಳನ್ನು ನಿರ್ಮಿಸಲಾಗುತ್ತಿದ್ದು, 13ರಂದು ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿ ಆದಷ್ಟು ಶೀಘ್ರ ಉದ್ಘಾಟನಾ ಕಾರ್ಯಕ್ರಮವು ನೆರವೇರಲಿದೆ. ಬಸವಣ್ಣ ಮತ್ತು ಕೆಂಪೇಗೌಡರ ಪ್ರತಿಮೆಗಳನ್ನು ಅಶ್ವಾರೂಢ ಮಾದರಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿದ್ದು, ಸಚಿವರಾದ ಆರ್.ಅಶೋಕ್ ಮತ್ತು […]

ಲಿಂಗಾಯತ-ಒಕ್ಕಲಿಗ ಸಮುದಾಯ ಓಲೈಕೆಗೆ ಕಸರತ್ತು

ಬೆಂಗಳೂರು,ಆ.24- ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಬಿಜೆಪಿ ಸರ್ಕಾರ ವಿಧಾನಸೌಧದ ಆವರಣದಲ್ಲಿ ದಾರ್ಶನಿಕ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸುವ ಮೂಲಕ ರಾಜ್ಯದ ಎರಡು ದೊಡ್ಡ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರನ್ನು ಓಲೈಸಲು ಪ್ರಯತ್ನಿಸುತ್ತಿದೆ. ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಪ್ರತಿಮೆಗಳು ಅನಾವರಣಗೊಳ್ಳುವ ನಿರೀಕ್ಷೆಯಿದೆ. ವಿಧಾನಸೌಧದ ಆವರಣದಲ್ಲಿ ಈಗಾಗಲೇ ಡಾ.ಬಿ.ಆರ್.ಅಂಬೇಡ್ಕರ್, ಕೆಂಗಲ್ ಹನುಮಂತಯ್ಯ, ಮಹಾತ್ಮ ಗಾಂಧಿ ಮತ್ತಿತರರ ಪ್ರತಿಮೆಗಳಿವೆ.2021ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾಗ ವಿಧಾನಸೌಧದಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆಗೆ ಸಚಿವ […]