ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಸೆ.25-ವಿಶ್ವವಿಖ್ಯಾತ ದಸರಾ ಉದ್ಘಾಟನೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಲಿರುವ ಅವರು 3.30ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ ಅಂಗವಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಿದ್ದಾರೆ. ವಿದ್ಯಾರಣ್ಯಪುರಂನಲ್ಲಿರುವ ಶ್ರೀ ರಾಮಲಿಂಗೇಶ್ವರ ಉದ್ಯಾನವನದಲ್ಲಿ ನಡೆಯಲಿರುವ […]