ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ವಾಗತಾರ್ಹ ; ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ 2022-23ನೇ ಸಾಲಿನ ಆಯವ್ಯಯವನ್ನು ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ಮುಕ್ತಕಂಠದಿ0ದ ಶ್ಲಾಘಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಈ ಉದ್ದೇಶಿತ ಬ್ಯಾಂಕಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ, ಕರ್ನಾಟಕ ಹಾಲು ಮಹಾಮಂಡಳ […]

ರಚನಾತ್ಮಕ ಹೆಜ್ಜೆಗಳ ದಿಟ್ಟ ಬಜೆಟ್ : ಅಶ್ವತ್ಥನಾರಾಯಣ ಸಂತಸ

ಬೆಂಗಳೂರು: `ಕೃಷಿ, ಉದ್ಯೋಗ ಸೃಷ್ಟಿ, ಶಿಕ್ಷಣದ ಬಲವರ್ಧನೆ ಮತ್ತು ಆರೋಗ್ಯ ಸೇವೆಗಳತ್ತ ಸಾಕಷ್ಟು ಗಮನ ಹರಿಸಿರುವ ಬಜೆಟ್ ಇದಾಗಿದೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬೇಕಾಗುವ ರಚನಾತ್ಮಕ ಕಾರ್ಯಕ್ರಮಗಳನ್ನು ಒಳಗೊಂಡಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬಜೆಟ್ ಮಂಡನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯದ ಸಮತೋಲಿತ ಅಭಿವೃದ್ಧಿಗೆ ದೂರದೃಷ್ಟಿಯುಳ್ಳ ಯೋಜನೆಗಳು ಮತ್ತು ಉಪಕ್ರಮಗಳು ಮುಖ್ಯ. ಈ ನಿಟ್ಟಿನಲ್ಲಿ ಬೊಮ್ಮಾಯಿ ಗಮನ ಹರಿಸಿರುವುದು ನಿಚ್ಚಳವಾಗಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ನಿರುದ್ಯೋಗದಂತಹ […]

ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಆನೆಬಲ ತುಂಬಿದ ಬಜೆಟ್‌ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮಾರ್ಚ್‌ 04: ದೇವಾಲಯಗಳನ್ನು ಸಮಗ್ರ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವ ನನ್ನ ಉದ್ದೇಶಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ ಆನೆ ಬಲ ತುಂಬಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ. ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ದಿಗೆ 100 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದ್ದು, ಈ ಮೂಲಕ ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನು ಅಯೋಧ್ಯ ಮಾದರಿಯಲ್ಲಿ ಅಭಿವೃದ್ದಿಗೊಳಿಸಲು […]

ಜೋಗ ಜಲಪಾತ, ಅಂಜನಾದ್ರಿ ಬೆಟ್ಟ ಮತ್ತು ಚಾಮುಂಡಿ ಬೆಟ್ಟಕ್ಕೆ ರೂಪ್‍ವೇ

ಬೆಂಗಳೂರು,ಮಾ.4- ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ, ಐಹೋಳೆ-ಪಟ್ಟದಕಲ್ಲು, ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ, ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ( ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್ ) ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಬೇಲೂರು, ಹಳೇಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಸ್ಸಳರ ಪವಿತ್ರ ತಾಣಗಳಲ್ಲಿ ವ್ಯಾಪ್ತಿಯಲ್ಲಿ ಬರುವ ಸ್ಮಾರಕಗಳನ್ನ ಪ್ರಸಕ್ತ ಸಾಲಿನಲ್ಲಿ ಯುನೆಸ್ಕೋವಿಶ್ವಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು. ಜೋಗ ಜಲಪಾತದಲ್ಲಿ […]

ಪೊಲೀಸ್ ಮೊಬಿಲಿಟಿ ಯೋಜನೆಗೆ 50 ಕೋಟಿ

ಬೆಂಗಳೂರು,ಮಾ.4- ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಪೊಲೀಸರು ತುರ್ತು ಸಂದರ್ಭದಲ್ಲೂ ತ್ವರಿತವಾಗಿ ಸ್ಥಳಕ್ಕೆ ದಾವಿಸಲು ಅನುಕೂಲವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಮೊಬಿಲಿಟಿ ಯೋಜನೆ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ( ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್ ) ಮೊಬಿಲಿಟಿ ಯೋಜನೆ ಪೊಲೀಸರಿಗೆ ಮತ್ತಷ್ಟು ಶಕ್ತಿ ನೀಡಲಿದ್ದು, ತುರ್ತು ಸಂದರ್ಭಗಳಲ್ಲಿ ಕ್ಷಿಪ್ರ ಪ್ರತಿಕ್ರಿಯೆಗೆ ಅನುಕೂಲವಾಗಿದೆ. ಇದರ ಜತೆಗೆ ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ತಲಾ 200 ಸರ್ವಲೆನ್ಸ್ ಕ್ಯಾಮೆರಾಗಳನ್ನು ಅಳವಡಿಸುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಒಂದು ನೂತನ […]

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಅನುದಾನ

ಬೆಂಗಳೂರು,ಮಾ.4- ಕನ್ನಡ ನಾಡು, ಸಂಸ್ಕøತಿ ಬಿಂಬಿಸಲು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಆಯೋಜಿಸಲು 20 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಣಕಾಸು ಸಚಿವರೂ ಆದ ಸಿಎಂ ಬೊಮ್ಮಾಯಿ ವರು ಇಂದು ಮಂಡಿಸಿದ ಆಯವ್ಯಯದಲ್ಲಿ ಈ ವಿಷಯ ಪ್ರಸ್ತಾಪಿಸಿ ಹಾವೇರಿಯ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು. ( ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್ ) ಕರ್ನಾಟಕ ಕಲಾ ಗ್ರಾಮವನ್ನು ಪೂರ್ಣಪ್ರಮಾಣದಲ್ಲಿ ಸಾಂಸ್ಕøತಿಕವಾಗಿ ಸಜ್ಜುಗೊಳಿಸಿ ಸಾಂಸ್ಕøತಿಕ […]

ಸರ್ಕಾರದ ನಿಯಂತ್ರಣದಿಂದ ಮುಕ್ತಿ, ದೇವಾಲಯಗಳಿಗೆ ಸ್ವಾಯತ್ತತೆ

ಬೆಂಗಳೂರು,ಮಾ.4- ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಿ ಅಭಿವೃದ್ಧಿ ಕಾಮಗಾರಿಗಳ ವಿವೇಚನೆಯನ್ನ ದೇವಾಲಯಗಳಿಗೆ ಪ್ರತ್ಯಾ ಯೋಜಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ( ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್ ) ಇಂದು ತಾವು ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಅವರು ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸಬೇಕೆಂಬ ಬೇಡಿಕೆ ಬಹುಕಾಲದಿಂದ ಕೇಳಿಬರುತ್ತಿದೆ. ಭಕ್ತಾಗಳ ಬೇಡಿಯನ್ನು ಪರಿಗಣಿಸಿ ಧಾರ್ಮಿಕ ಲಾಖೆ […]

ರಾಜ್ಯದ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಸ್ಟೇಡಿಯಂ ನಿರ್ಮಾಣ

ಬೆಂಗಳೂರು,ಮಾ.4- ಗ್ರಾಮೀಣ ಹಾಗೂ ದೇಶಿ ಕ್ರೀಡೆಗಳನ್ನು ಉತ್ತೇಜಿಸಲು ರಾಜ್ಯದ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಕ್ರೀಡಾಂಗಣಗಳನ್ನು ಒಟ್ಟು 504 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ( ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್ ) ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ರಾಜ್ಯದ ಕ್ರೀಡಾಂಗಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಮತ್ತು ಮೇಲ್ದರ್ಜೆಗೆ ಏರಿಸಲು ಬಳಕೆದಾರರ ಶುಲ್ಕ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ಹೇಳಿದರು. ಉತ್ತರ ಕನ್ನಡ, ಚಿತ್ರದುರ್ಗ, ರಾಮನಗರ, ಕೆಆರ್‍ಎಸ್, ಆಲಮಟ್ಟಿ ಹಿನ್ನೀರಿನಲ್ಲಿ ಸಾಹಸ […]

ಜನರಗೆ ತೆರಿಗೆ ಹೊರೆ ಹೇರದ ಬೊಮ್ಮಾಯಿ : ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್

ಬೆಂಗಳೂರು,ಮಾ.4- ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದ ಜನತೆಗೆ ಹೊಸ ತೆರಿಗೆಯನ್ನು ವಿಸದೆ ಸರ್ವರನ್ನು ಸಂತೃಪ್ತಿಗೊಳಿಸುವ ಹೊಸ ಚೈತನ್ಯ, ಹೊಸ ಚಿಂತನೆ, ಹೊಸ ಮುನ್ನೋಟದೊಂದಿಗೆ ನವಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣ ಮಾಡುವ ಹೆಗ್ಗುರಿಯೊಂದಿಗೆ ಪ್ರಸಕ್ತ ಸಾಲಿನ ಬಜೆಟ್ ಇಂದು ಮಂಡನೆಯಾಗಿದೆ. (KARNATAKA BUDGET 2022-ಕರ್ನಾಟಕ ಬಜೆಟ್ 2022 (Live Updates) ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು […]