ನಾಳೆ 108 ಅಡಿ ಮಾದಪ್ಪ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು, ಮಾ.17- ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ನಡುವಲ್ಲೇ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿರುವ ಆಡಳಿತಾರೂಢ ಬಿಜೆಪಿ ಸರ್ಕಾರವು ಹಲವು ಯೋಜನೆಗಳಿಗೆ ಚಾಲನೆ ನೀಡುತ್ತಿದೆ. ಅಸಂಖ್ಯಾತ ಭಕ್ತರ ಪಾಲಿನ ದೈವ ಮಾಯ್ಕರ ಮಾದಪ್ಪನ ನೆಲದಲ್ಲಿ ಮುಗಿಲೆತ್ತರದಲ್ಲಿರುವ 108 ಅಡಿ ಪ್ರತಿಮೆ ಮೊದಲನೇ ಹಂತದ ಕಾಮಗಾರಿ ಮುಗಿದಿದ್ದು ಮುಖ್ಯಮಂತ್ರಿ, ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಬಸವರಾಜ ಬೊಮ್ಮಾಯಿ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ಪ್ರಾಧಿಕಾರದ ವತಿಯಿಂದ ನಿರ್ಮಾಣಗೊಂಡಿರುವ ಬೆಳ್ಳಿರಥವೂ ಲೋಕಾರ್ಪಣೆ ಆಗಲಿದೆ. 20 […]

ಮತ್ತೆ ದೆಹಲಿಯತ್ತ ಸಿಎಂ, ಸಂಪುಟ ವಿಸ್ತರಣೆಯೋ..?ಪುನಾರಚನೆಯೊ..?

ಬೆಂಗಳೂರು,ನ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತ್ತೆ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮಯಾವಕಾಶ ಕೋರಿದ್ದು,ಅವಕಾಶ ಸಿಕ್ಕಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಕುರಿತು ಚರ್ಚಿಸಲಿದ್ದಾರೆಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ಕೆಲವು […]

ಫೆ. 10ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ..? ಸಿಎಂ ಬೊಮ್ಮಾಯಿ ತಯಾರಿ

ಬೆಂಗಳೂರು,ನ.4-ವಿಧಾನಸಭೆ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸುತ್ತಿರುವ ಬೆನ್ನಲ್ಲೇ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಕೊನೆಯ ಬಜೆಟ್‍ನ್ನು 2023ರ ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ಕಳೆದ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದ ಕಾರ್ಯಕ್ರಮಗಳು ಹಾಗೂ ಅದರ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಮೂಲಗಳ ಪ್ರಕಾರ ಫೆಬ್ರವರಿ 10ರಂದು ಬಜೆಟ್ ಮಂಡನೆ ಮಾಡುವ ಸಾಧ್ಯತೆಯಿದ್ದು, ಫೆ.26ರವರೆಗೆ […]

ಸಿಎಂ ಬೊಮ್ಮಾಯಿ ಕನ್ನಡ ರಾಜ್ಯೋತ್ಸವ ಸಂದೇಶ

ಬೆಂಗಳೂರು, ನ.1- 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಿನ ಸಮಸ್ತ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ […]

ಅತಿವೃಷ್ಟಿ ಪರಿಹಾರಕ್ಕೆ ಕಾರ್ಯಪಡೆ ರಚನೆ : ಬೊಮ್ಮಾಯಿ

ಬೆಂಗಳೂರು,ಅ.21- ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ, ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ವಿಪತ್ತು ಟಾಸ್ಕ್ ಫೋರ್ಸ್‍ನ್ನು ಜಿಲ್ಲಾ ಮಟ್ಟದಲ್ಲಿ ರಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಹೈಕೋರ್ಟ್ ಆದೇಶ ಈ ಸಂಬಂಧ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ, ಕಳೆದ 4 ವರ್ಷಗಳಿಂದ ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವುದರಿಂದ, ಜಿಲ್ಲಾ ಮಟ್ಟದಲ್ಲೇ ಟಾಸ್ಕ್ […]

“ದೇಶವನ್ನು ಇಬ್ಭಾಗ ಮಾಡಿದವರೇ ಈಗ ಭಾರತ್ ಜೋಡೊ ಯಾತ್ರೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ”

ವಿಜಾಪುರ,ಸೆ.30- ದೇಶವನ್ನು ಇಬ್ಭಾಗ ಮಾಡಿದವರೇ ಕಾಂಗ್ರೆಸ್ ಪಕ್ಷದವರು. ಈಗ ಭಾರತ್ ಜೋಡೊ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತವನ್ನು ಒಡೆದು ದೇಶವನ್ನು ಕತ್ತರಿಸಿದವರು ಕಾಂಗ್ರೆಸಿಗರು. ಭಾರತ್ ಜೋಡೋ ಬದಲಿಗೆ ಕಾಂಗ್ರೆಸ್ ಚೋಡೊ ಮಾಡಿದ್ದರೆ ಅರ್ಥ ಬರುತ್ತಿತ್ತು ಎಂದು ವ್ಯಂಗ್ಯವಾಡಿದರು. ಯಾವ ಪುರುಷಾರ್ಥಕ್ಕೆ ಭಾರತ್ ಜೋಡೋ ನಡೆಸುತ್ತಿದ್ದಾರೊ ಗೊತ್ತಿಲ್ಲ. ಇದರಲ್ಲಿ ರಾಜಕೀಯ ಲಾಭ ಬಿಟ್ಟರೆ ಬೇರೇನೂ ಇಲ್ಲ. ದೇಶವನ್ನು ಒಗ್ಗೂಡಿಸುತ್ತೇವೆ ಎನ್ನುವವರಿಗೆ ದೇಶದ ಇತಿಹಾಸ ಗೊತ್ತಿದೆಯೇ ಎಂದು […]

ಹಾಲಿನ ದರ ಏರಿಸುವ ಕೆಎಂಎಫ್ ಬೇಡಿಕೆ ತಿರಸ್ಕರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು,ಸೆ.26- ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಹಾಲಿನ ದರ ಏರಿಕೆ ಮಾಡಬೇಕೆಂಬ ಕೆಎಂಎಫ್ ಬೇಡಿಕೆಯನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸುವುದು ಸಮಂಜಸವಲ್ಲ. ಈಗಾಗಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ. ಇಂಥ ಸಂದರ್ಭದಲ್ಲೇ ಹಾಲಿನ ದರ ಏರಿಕೆ ಮಾಡಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಹೀಗಾಗಿ ಸದ್ಯಕ್ಕೆ ಈ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹಾಲು ಒಕ್ಕೂಟ ಮಂಡಳಿಯ ನಿರ್ದೇಶಕರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಏಕಾಏಕಿ ಒಂದು […]

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸದ್ಯದಲ್ಲೇ ಮೊಬಿಲಿಟಿ ಪ್ಲಾನ್ ಜಾರಿ : ಸಿಎಂ ಬೊಮ್ಮಾಯಿ

ಬೆಂಗಳೂರು,ಆ.14- ನಗರದ ಸಮಗ್ರ ಅಭಿವೃದ್ಧಿಗೆ ಸದ್ಯದಲ್ಲೇ ಮೊಬಿಲಿಟಿ ಪ್ಲಾನ್ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬವರಾಜ ಬೊಮ್ಮಾಯಿ ಅವರು ತಿಳಿಸಿದರು.ವಿಧಾನಸೌಧದ ಮುಂಭಾಗ ಬೆಂಗಳೂರು ನಗರ ಸಾರಿಗೆ ಸಂಸ್ಥೆಯ 75 ವಿದ್ಯುತ್ ಚಾಲಿತ ಬಸ್‍ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬೆಂಗಳೂರು ಬೆಳವಣಿಗೆಗೆ ಎಲ್ಲಾ ದಿಕ್ಕಿನಲ್ಲೂ ಸರಿಸಮನಾಗಿ ಆಗಬೇಕು. ಕೇವಲ ಸಂಚಾರ ಸುಧಾರಣೆ ಮಾತ್ರವಲ್ಲ. ಸಮಗ್ರವಾಗಿ ಅಭಿವೃದ್ಧಿಯಾಗಬೇಕಿದೆ ಎಂದರು.ಬಿಎಂಟಿಸಿಗೆ ಪ್ರಸಕ್ತ ಸಾಲಿನಲ್ಲಿ 270 ಕೋಟಿ ರೂ. ಸಹಾಯ ಧನ ನೀಡುತ್ತಿದ್ದು, 420 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೋವಿಡ್ […]

ಸಿಎಂ ಬೊಮ್ಮಾಯಿ ಅವರಿಗೆ ಕೊರೋನಾ, ಬಹುನಿರೀಕ್ಷಿತ ದೆಹಲಿ ಪ್ರವಾಸ ರದ್ದು

ಬೆಂಗಳೂರು,ಆ.6- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬಹುನಿರೀಕ್ಷಿತ ದೆಹಲಿ ಪ್ರವಾಸ ರದ್ದುಗೊಂಡಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೊರೋನಾ ದೃಢಪಟ್ಟ ತಕ್ಷಣ ಪ್ರತ್ಯೇಕವಾಗಿದ್ದು ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿಗೆ ತೆರಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಅಕೃತ […]

ಪೊಲೀಸರಿಗೆ ಸಿಎಂ ಬೊಮ್ಮಾಯಿ ಹಿಗ್ಗಾಮುಗ್ಗಾ ಕ್ಲಾಸ್

ಬೆಂಗಳೂರು,ಜು.30- ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳನ್ನು ಬಂಸುವಲ್ಲಿ ವಿಫಲವಾಗಿರುವ ಪೊಲೀಸರ ಕಾರ್ಯ ವೈಖರಿ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಡ ಕಾರಿದ್ದಾರೆ. ಪ್ರಕರಣ ನಡೆದು 4 ದಿನವಾಗಿದೆ. ಇಡೀ ರಾಜ್ಯಾದ್ಯಂತ ಇದರ ಆಕ್ರೋಶ ಜ್ವಾಲಾಮುಖಿಯಂತೆ ಸೋಟಗೊಳ್ಳುತ್ತಿದೆ. ಆರೋಪಿಗಳನ್ನು ಏಕೆ ಬಂಸುತ್ತಿಲ್ಲ ಎಂದು ಬೊಮ್ಮಾಯಿ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ಸೂದ್ ಹಾಗೂ ಗುಪ್ತಚರ ವಿಭಾಗದ ಎಡಿಜಿಪಿ ಬಿ.ದಯಾನಂದ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕಾನೂನು ಸುವ್ಯವಸ್ಥೆ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳ […]