3ನೇ ಬಾರಿಗೆ ಸಭಾಪತಿಯಾಗಿ ಹೊಸ ದಾಖಲೆ ಬರೆದ ಹೊರಟ್ಟಿ

ಬೆಳಗಾವಿ, ಡಿ.21- ವಿಧಾನ ಪರಿಷತ್ತಿನ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನಿರೀಕ್ಷೆಯಂತೆ ಮೇಲ್ಮನೆಯ ನೂತನ ಸಭಾಪತಿಯಾಗಿ ಸರ್ವಾನುಮತದಿಂದ ಆಯ್ಕೆಯಾದರು. ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ವಿಧಾನಪರಿಷತ್ತಿನ ಸದಸ್ಯರಾಗಿರುವ ಬಸವರಾಜ ಹೊರಟ್ಟಿ ಅವರು, 2018ರ ಜೂನ್‍ನಿಂದ ಡಿಸೆಂಬರ್‍ವರೆಗೆ ಮೊದಲ ಬಾರಿಗೆ ಸಭಾಪತಿಯಾಗಿದ್ದರು. ಬಳಿಕ 2021 ಫೆಬ್ರವರಿಯಿಂದ 2022ರ ಮೇ ವರೆಗೆ ಎರಡನೇ ಬಾರಿಗೆ ಸಭಾಪತಿಯಾಗಿ, ಪ್ರಸ್ತುತ ಮೂರನೇ ಬಾರಿಗೆ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ ವಿಧಾನಪರಿಷತ್ತಿನ […]

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ

ಬೆಳಗಾವಿ, ಡಿ.20-ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯ ಹಿರಿಯ ಸದಸ್ಯ ಹಾಗೂ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು. ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ತಟಸ್ಥವಾಗಿದ್ದು, ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಸಚೇತಕ ವೈ.ಎನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹಾಜರಿದ್ದರು. ನಾಳೆ ಮೇಲ್ಮನೆಯಲ್ಲಿ ಚುನಾವಣೆ ಪ್ರಕ್ರಿಯೆ […]