ಮುರುಘಾ ಶ್ರೀ ವಿರುದ್ಧ ಪಿತೂರಿ, ಬಂಧಿತರಿಗೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ,ನ.14- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀ ವಿರುದ್ಧ ಪಿತೂರಿ ನಡೆಸಿರುವ ಆರೋಪದ ಮೇಲೆ ಬಂಧಿತರಾಗಿರುವ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಸೋಮವಾರ ಅವರನ್ನು ಜಿಲ್ಲಾ ಒಂದನೇ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾೀಧಿಶರು ಆರೋಪಿಗಳಾದ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದರು. […]