ಬಿಬಿಎಂಪಿ 8 ವಲಯದಿಂದ 1 ಲಕ್ಷ ಮಂದಿಗೆ ಬೂಸ್ಟರ್ ಡೋಸ್

ಬೆಂಗಳೂರು, ಜ.10- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೆ ಅಲೆ ತೀವ್ರತೆ ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ತಜ್ಞರ ಸೂಚನೆ ಮೇರೆಗೆ ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರದ ಬೊಮ್ಮನಹಳ್ಳಿ, ದಾಸರಹಳ್ಳಿ, ಪೂರ್ವವಲಯ, ಮಹದೇವಪುರ, ರಾಜರಾಜೇಶ್ವರಿನಗರ, ದಕ್ಷಿಣ ವಲಯ, ಪಶ್ಚಿಮ ವಲಯ, ಯಲಹಂಕ ಸೇರಿದಂತೆ ಎಂಟು ವಲಯಗಳಿಂದ 1,00,254 ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಬೇಕಾಗಿರುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. […]