ಅನುದಾನ ನೀಡದಿದ್ದರೆ ಬಿಬಿಎಂಪಿ -ಸಿಎಂ ಕಚೇರಿ ಎದುರು ಧರಣಿ : ರಾಮಲಿಂಗಾ ರೆಡ್ಡಿ

ಬೆಂಗಳೂರು,ಜ.7-ಮಳೆ ನೀರು ಸರಾಗವಾಗಿ ಹರಿಯುವ ಕಾಮಗಾರಿಗಳನ್ನು ಕೈಗೊಳ್ಳಲು ಜಯನಗರ ಮತ್ತು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಗಳಿಗೆ ಒಂದು ಪೈಸೆಯೂ ಹಣ ಕೊಟ್ಟಿಲ್ಲ. ಇದನ್ನು ವಿರೋಧಿಸಿ ಬಿಬಿಎಂಪಿ ಕಚೇರಿ ಎದುರು ಫುಟ್ಪಾತ್ ಮೇಲೆ ಕುಳಿತು ಧರಣಿ ಮಾಡುತ್ತೇವೆ. ಬುಧವಾರ ಮುಖ್ಯಮಂತ್ರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 1479 ಕೋಟಿ ರೂ. ವೆಚ್ಚದಲ್ಲಿ 298 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಅದರಲ್ಲಿ ಬಿಜೆಪಿಯ 15 ಮಂದಿ […]