ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

ಬೆಂಗಳೂರು,ಜು.29-ವಾರ್ಡ್‍ಗಳ ಪುನರ್ ವಿಂಗಡಣೆ, ಮೀಸಲಾತಿ ಮತ್ತು ಗಡಿ ಗುರುತಿಸುವಿಕೆ ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಮಯ ಅವಕಾಶ ಬೇಕಾಗಿರುವುದರಿಂದ ಬಿಬಿಎಂಪಿ ಚುನಾವಣೆಯನ್ನು ಕೆಲ ದಿನಗಳ ಮಟ್ಟಿಗೆ ಮುಂದೂಡಲು ಅವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. ನಿನ್ನೆ ಸುಪ್ರೀಂಕೋರ್ಟ್ ಒಂದು ವಾರದೊಳಗೆ ಮೀಸಲಾತಿ ಹಾಗೂ ವಾರ್ಡ್ ಪುನರ್ ವಿಂಗಡಣೆಯನ್ನು ಸಿದ್ದಪಡಿಸಿ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.ಆದರೆ ಒಂದು ವಾರದೊಳಗೆ ಈ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ. ಕನಿಷ್ಠ ಪಕ್ಷ ಎರಡು […]