ಭ್ರಷ್ಟಾಚಾರ ಕೇಂದ್ರಗಳಾದ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ

ಬೆಂಗಳೂರು, ಫೆ.25- ಎಸಿಬಿ ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಂಚಲನ ಮೂಡಿಸಿದ್ದ ಬೆನ್ನಲ್ಲೇ ಇದೀಗ ಬಿಬಿಎಂಪಿ ಕಚೇರಿ ಮೇಲೆ ಮುಗಿಬಿದ್ದಿದೆ. ಇಂದು ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಕಚೇರಿ ಸೇರಿದಂತೆ ನಗರ ಯೋಜನೆ, ಕೇಂದ್ರ ಕಚೇರಿ, ಟಿಡಿಆರ್, ವಲಯ ಕಚೇರಿ, ಜಂಟಿ ಆಯುಕ್ತರ ಕಚೇರಿ, ರೆವಿನ್ಯೂ ಕಚೇರಿ ಸೇರಿದಂತೆ 27 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ಮುಂದುವರಿಸಿದೆ. ಡಿವೈಎಸ್‍ಪಿ, ಪೊಲೀಸ್ ಇನ್ಸ್‍ಪೆಕ್ಟರ್ ಅವರನ್ನೊಳಗೊಂಡ 200 […]