ಬಿಬಿಎಂಪಿ ಕಚೇರಿಗಳ ಮೇಲೆ ಮುಂದುವರಿದ ಎಸಿಬಿ ದಾಳಿ

ಬೆಂಗಳೂರು, ಮಾ.2- ಬಿಬಿಎಂಪಿ ಕಚೇರಿಗಳ ಮೇಲೆ ಇಂದು ಕೂಡ ಎಸಿಬಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಕೇಂದ್ರ ಕಚೇರಿ ಸೇರಿದಂತೆ ಇತರೆ ವಿಭಾಗಗಳಲ್ಲಿ ಕಡತಗಳನ್ನು ಪರಿಶೀಲನೆ ನಡೆಸಿದರು. ಯಲಹಂಕ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ವಿವಿಧ ವಲಯ ಕಚೇರಿಗಳಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಎಂಟು ವಲಯಗಳಲ್ಲೂ ಎಸಿಬಿಯ 10 ತಂಡಗಳು ದಾಳಿ ನಡೆಸಿದ್ದು, ಕಂದಾಯ, ಇಂಜಿನಿಯರಿಂಗ್, ಟಿಡಿಆರ್ ವಿಭಾಗಕ್ಕೆ ಸೇರಿದ ಆಕ್ರಮ ಕಡತಗಳ ಹುಡುಕಾಟ ಮುಂದುವರಿದಿದೆ. ಫೀಲ್ಡï ವಿಸಿಟ್ ಮೂಲಕ ಮಾಹಿತಿ ಕಲೆ ಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮಡಿವಾಳ, […]