ಬಿಬಿಎಂಪಿ ವಾರ್ಡ್ ಮರುವಿಂಗಡಣೆಗೆ ಕೋಟಿ ಕೋಟಿ ಖರ್ಚು

ಬೆಂಗಳೂರು,ಡಿ.24- ಈ ಹಿಂದೆ ಇದ್ದ 198 ವಾರ್ಡ್‍ಗಳನ್ನು 243 ವಾರ್ಡ್‍ಗಳನ್ನಾಗಿ ಮರು ವಿಂಗಡಣೆ ಮಾಡಿರುವುದರಿಂದ ಬಿಬಿಎಂಪಿಗೆ ಆರ್ಥಿಕ ಹೊರೆ ಹೆಚ್ಚಾಗಿದೆ. ವಾರ್ಡ್ ವಿಂಗಡಣೆ ಮಾಡಲು ಬಿಬಿಎಂಪಿಗೆ ಸಿಬ್ಬಂದಿ ವೇತನ, ಕಚೇರಿ ಇತರೆ ಖರ್ಚು ವೆಚ್ಚಗಳು ಸೇರಿ ತಿಂಗಳಿಗೆ 10 ರಿಂದ 15 ಕೋಟಿ ರೂ.ಗಳ ಹೆಚ್ಚುವರಿ ಹೊರೆ ಬಿದ್ದಿದೆ. 198 ವಾರ್ಡ್‍ಗಳನ್ನು 243 ವಾರ್ಡ್‍ಗಳನ್ನಾಗಿ ಪರಿವರ್ತಿಸಿರುವುದರಿಂದ ಹೆಚ್ಚುವರಿಯಾಗಿ 45 ವಾರ್ಡ್‍ಗಳನ್ನು ರಚಿಸಬೇಕಾದರೆ ವಾರ್ಷಿಕ ನೂರಾರು ಕೋಟಿ ರೂ.ಗಳನ್ನು ಪಾಲಿಕೆಯಿಂದ ಭರಿಸಬೇಕಿದೆ. ವಾರ್ಡ್ ಪುನರ್‍ವಿಂಗಡಣೆಗೆ ಹೆಚ್ಚುವರಿ ಹುದ್ದೆ ಸೃಷ್ಟಿಸಿ […]