ರಾಷ್ಟ್ರೀಯ ಶಿಕ್ಷಣ ನೀತಿ ಮುಂದಿನ ವರ್ಷ ಅನುಷ್ಠಾನ

ಬೆಂಗಳೂರು,ನ.1- ಗುಣಮಟ್ಟದ ಶಿಕ್ಷಣ ನೀಡುವಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಹಳ ಪ್ರಮುಖ ಪಾತ್ರ ವಹಿಸುವ ಕಾರಣ ಇದರಲ್ಲಿರುವ ಎಲ್ಲ ಅಂಶಗಳನ್ನು ಜಾರಿ ಮಾಡಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನಕ್ಕೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿ ರುವ 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ – 2022ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. […]