ತಾಂತ್ರಿಕ ಸಲಹಾ ಸಮಿತಿ ಅನುಮತಿ ನೀಡಿದರೆ ಶಾಲೆಗಳ ಪುನರಾರಂಭ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಜ.20- ತಾಂತ್ರಿಕ ಸಲಹಾ ಸಮಿತಿ ಶಾಲೆಗಳನ್ನು ತೆರೆಯಲು ಅನುಮತಿ ನೀಡಿದರೆ ಮುಚ್ಚಿರುವ ಶಾಲೆಗಳನ್ನು ಪುನರಾರಂಭ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಶಿಫಾರಸಿನಂತೆ ಕೆಲವು ನಗರಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿತ್ತು. ನಾಳೆ ನಡೆಯುವ ಸಭೆಯಲ್ಲಿ ಯಾವ ಸಲಹೆ ನೀಡುತ್ತಾರೋ ಅದರ ಮೇಲೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಪ್ರತಿಯೊಂದು ಮಾಹಿತಿ ಇದೆ. ಶಿಕ್ಷಣ ಇಲಾಖೆ ಅಕಾರಿಗಳು […]