NEP ಪಠ್ಯಕ್ರಮ ಜಾರಿಗೆ ತಜ್ಞರ ಸಮಿತಿ ರಚನೆ

ಬೆಂಗಳೂರು,ನ.15- ಮುಂಬರುವ ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಜಾರಿ ಮಾಡುವ ಸಂಬಂಧ ರಾಜ್ಯ ಪಠ್ಯ ಕ್ರಮ ಚೌಕಟ್ಟು ರಚನೆಗಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬೇಕು. ರಾಜ್ಯ ಪಠ್ಯಕ್ರಮ ಚೌಕಟ್ಟು ಕುರಿತಾಗಿ ಶಿಕ್ಷಣ […]

ಶಾಲೆಗಳಲ್ಲಿ ಧ್ಯಾನ ವಿರೋಧಿಸಿದ ಸಿದ್ದುಗೆ ಸಚಿವ ಬಿ.ಸಿ.ನಾಗೇಶ್ ತಿರುಗೇಟು

ಬೆಂಗಳೂರು,ನ.5-ಶಾಲಾಕಾಲೇಜುಗಳಲ್ಲಿ ಹತ್ತು ನಿಮಿಷ ಧ್ಯಾನ ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ. ನಿಮ್ಮ ಅಧಿವಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು […]

ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಸಿಐಡಿ ತನಿಖೆಗೆ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು,ಸೆ.20- ಕಳೆದ 2015-16ರಲ್ಲಿ ಅರ್ಜಿ ಸಲ್ಲಿಸದೆ, ಪರೀಕ್ಷೆ ಬರೆಯದೆ, ಅರ್ಹತೆ ಇಲ್ಲದೆ, ಶಿಕ್ಷಕರಾಗಿ ನೇಮಕವಾಗಿದ್ದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಶಾಸಕರಾದ ಪಿ.ರಾಜೀವ್ ಹಾಗೂ ಎ.ಎಸ್.ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಸ್ಸೆಸ್ಸೆಲಿ ಮಂಡಳಿಯ ನಿರ್ದೇಶಕರಿಂದ ತನಿಖೆ ನಡೆಸಿದಾಗ ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಬೆಂಗಳೂರು ವಿಭಾಗದಲ್ಲಿ ಗೊತ್ತಾದ ನಂತರ ಸಿಐಡಿಗೆ ವಹಿಸಲಾಗಿದೆ. ಸಿಇಟಿ ಬರೆಯದೆ, ಅರ್ಹತೆ ಬರೆಯದೆ, ಅರ್ಜಿ ಸಲ್ಲಿಸದೆ 16 ಮಂದಿ ಶಿಕ್ಷಕರಾಗಿ […]

1120 ದೈಹಿಕ ಶಿಕ್ಷಕರ ನೇಮಕಾತಿಗೆ ಪ್ರಸ್ತಾಪನೆ ಸಲ್ಲಿಸಲಾಗಿದೆ : ಬಿ.ಸಿ.ನಾಗೇಶ್

ಬೆಂಗಳೂರು,ಸೆ.19- ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದರು. ಉಳಿದಂತೆ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣದಡಿ ಹತ್ತು ಸಾವಿರಕ್ಕೂ […]

ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಕ್ರಾಂತಿ ಮಾಡಿದೆ : ಸಚಿವ ನಾಗೇಶ್

ಬೆಂಗಳೂರು, ಜು.19- ವಾಜಪೇಯಿ ಆಡಳಿತ ಅವಧಿಯಿಂದ ಇಲ್ಲಿಯವರೆಗೆ ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಕ್ರಾಂತಿ ಮಾಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದು ತಿಳಿಸಿದರು. ಬೆಂಗಳೂರು ಪ್ರೆಸ್‍ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ವ ಶಿಕ್ಷಣ ಅಭಿಯಾನದ ಮೂಲಕ ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾಗಳು ಹೆಚ್ಚು ಒತ್ತು ಕೊಡುವ ಮೂಲಕ ಅಭಿವೃದ್ಧಿಯನ್ನು ಸಾಧಿಸಿವೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ನಂತರ ಬಂದ ಸುರೇಶ್ ಕುಮಾರ್ ಅನೇಕ ಸಕಾರಾತ್ಮಕ ಮತ್ತ ಅಭಿವೃದ್ಧಿ […]