ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ಬದ್ಧ, ಸಾತ್ವಿಕ ಆಹಾರದ ಪ್ರಸ್ತಾವನೆಗಳಿಲ್ಲ : ಬಿ.ಸಿ.ನಾಗೇಶ್

ಬೆಂಗಳೂರು,ಫೆ.13- ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣವನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಆದರೆ ಸಾತ್ವಿಕ ಆಹಾರದ ಬಗ್ಗೆ ಯಾವುದೇ ಪ್ರಸ್ತಾವನೆಗಳಿಲ್ಲ ಎಂದು ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. ವಿಧಾನಪರಿಷತ್ನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದರಿಂದ ಎಂಟನೇ ತರಗತಿಯವರೆಗೂ ಮೊಟ್ಟೆ ನೀಡಬೇಕು ಎಂದು 2007ರಿಂದಲೂ ಚರ್ಚೆ ನಡೆಯುತ್ತಿದೆ. ಆದರೆ ಕೊಟ್ಟಿರಲಿಲ್ಲ. ನಮ್ಮ ಸರ್ಕಾರ ಯಾವುದೇ ವಿರೋಧ ಬಂದರೂ ಲೆಕ್ಕಿಸದೆ ಮೊದಲು ಅಪೌಷ್ಠಿಕತೆ ಹೆಚ್ಚಿರುವ ಜಿಲ್ಲೆಗಳಲ್ಲಿ ಮೊಟ್ಟೆ ನೀಡುವುದನ್ನು ಪ್ರಾಯೋಗಿಕವಾಗಿ ಜಾರಿಗೆ […]