ಭಿಕ್ಷಾಟನೆ ತಡೆಯಲು ಯೋಜನೆ

ಬೆಂಗಳೂರು,ಜು.18- ಎಲ್ಲ ಇಲಾಖೆಗಳ ಸಹಯೋಗದಿಂದ ತಾಯಿ-ಮಗುವಿನ ಭಿಕ್ಷಾಟನೆ ತಡೆಯಲು ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಕಾಸಸೌಧದಲ್ಲಿ ನಡೆದ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳು-ತಾಯಂದಿರನ್ನು ರಕ್ಷಿಸಲು ಮತ್ತು ಭಿಕ್ಷಾಟನೆ ನಿಯಂತ್ರಿಸುವ ಸಂಬಂಧ ನಡೆದ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಂಗಳೂರಿನಲ್ಲಿ 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ ಎಂದು ಕಾನೂನು ಸೇವಾ ಪ್ರಾಧಿಕಾರ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ಮಕ್ಕಳ-ತಾಯಿಂದಿರ ಭಿಕ್ಷಾಟನೆ ತಡೆಯಲು ಬೆಂಗಳೂರಿನಲ್ಲಿ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ 8 ವಿಭಾಗಗಳಲ್ಲಿ […]