ಜಂಟಿ ಅಧಿವೇಶನ: ವಾಕ್ಸಮರಕ್ಕೆ ವೇದಿಕೆ ಸಜ್ಜು

ಬೆಂಗಳೂರು,ಫೆ.8- ವರ್ಷದ ಮೊದಲ ಜಂಟಿ ಅಧಿವೇಶನ ಶುಕ್ರವಾರ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ಶುಕ್ರವಾರ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸದನವನ್ನು ಶಿಷ್ಟಾಚಾರದಂತೆ ಸೋಮವಾರಕ್ಕೆ ಮುಂದೂಡಲಿದ್ದಾರೆ. ನಂತರ ಸೋಮವಾರ ರಾಜ್ಯಪಾಲರ ಭಾಷಣಕ್ಕೆ ಮೇಲೆ ಚರ್ಚೆ ನಡೆಯಲಿದೆ. ಸರ್ಕಾರದ ಮೇಲೆ ಕೇಳಿಬಂದಿರುವ ಕೆಲವು ಭ್ರಷ್ಟಾಚಾರದ ಆರೋಪಗಳ ಕುರಿತು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಗಿಬೀಳಲು ಸಜ್ಜಾಗಿವೆ. ಗುತ್ತಿಗೆದಾರರ ಸಂಘ […]

ಡಿ.7ರಿಂದ 29ರವರೆಗೆ ಸಂಸತ್ ಅಧಿವೇಶನ

ನವದೆಹಲಿ,ನ.19- ಬಹುನಿರೀಕ್ಷಿತ ಸಂಸತ್‍ನ ಚಳಿಗಾಲದ ಅಧಿವೇಶನ ಡಿ.7ರಿಂದ 29ರವರೆಗೆ 17 ದಿನಗಳ ಕಾಲ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿ.7ರಿಂದ 29ರವರೆಗೆ ಅವೇಶನ ನಡೆಸಲು ತೀರ್ಮಾನಿಸಲಾಗಿದ್ದು, ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳು ಸದನ ಜರುಗಲಿದೆ ಎಂದಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಆರೋಗ್ಯಪೂರ್ಣ ಚರ್ಚೆ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ […]

ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದ ಜೆಡಿಎಸ್, ಚುನಾವಣಾ ಪ್ರಚಾರ ಆರಂಭ

ಬೆಂಗಳೂರುನ.18- ಪ್ರತಿಪಕ್ಷ ಕಾಂಗ್ರೆಸ್‍ನ ಭಾರತ ಐಕ್ಯತಾಯಾತ್ರೆ, ಆಡಳಿತಾರೂಢ ಬಿಜೆಪಿಯ ಜನಸಂಕಲ್ಪ ಯಾತ್ರೆಯ ಬೆನ್ನಲ್ಲೆ ಜೆಡಿಎಸ್ ಪಂಚರತ್ನ ರಥಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರ ಪ್ರಾರಂಭಿಸಿದೆ. ರಾಜ್ಯದ ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮಲೆ ಶ್ರೀ ಗಣಪತಿ ದೇವಾಲಯದಿಂದ ನ.1ರಂದೇ ರಥಯಾತ್ರೆ ಆರಂಭವಾಗಿತ್ತು. ಆದರೆ ಮಳೆಯ ಕಾರಣದಿಂದ ಮುಂದೂಡಲಾಗಿತ್ತು. ಬಳಿಕ ನ.14ರಂದು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆಗಲೂ ಮಳೆ ಅಡ್ಡಿಯಾಗಿ ಯಾತ್ರೆ ಮುಂದೂಡಲಾಗಿತ್ತು.ಮಳೆಯಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ಈ ಪಂಚರತ್ನ ರಥಯಾತ್ರೆಯು ಇದೀಗ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ […]

ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ

ಬೆಂಗಳೂರು,ಅ.27- ನಗರದ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನ.1 ರಂದು ಪ್ರಾರಂಭಿಸಲಿರುವ ಪಂಚರತ್ನ ರಥಯಾತ್ರೆಯ ಒಂದು ರಥಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮುಖಂಡರು ಪೂಜೆ ಸಲ್ಲಿಸಿದರು. ನವೆಂಬರ್ ಒಂದರಂದು ಕೋಲಾರ ಜಿಲ್ಲಾಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಕಳೆದ 1994ರಲ್ಲಿ ಹೆಚ್.ಡಿ.ದೇವೇಗೌಡರು ಕುರುಡುಮಲೆಯಿಂದಲೇ ಚುನಾವಣಾ ಪ್ರಚಾರ ಆರಂಭ ಮಾಡಿದ್ದರು. ಆಗ ಅವರು ಬಹುಮತ ಗಳಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದ್ದರು. ಈಗ ನಾವೂ ಅಲ್ಲಿಂದಲೇ […]

ದಕ್ಷಿಣ ಕೊರಿಯಾ ಸಮರಾಭ್ಯಾಸ: ಯುದ್ಧದ ಕಾರ್ಮೋಡ

ಸಿಯೋಲ್, ಆ.22- ಅಮೆರಿಕಾ ಜೊತೆಗೂಡಿ ದಕ್ಷಿಣ ಕೊರಿಯಾ ತನ್ನ ಸಮರಾಭ್ಯಾಸವನ್ನು ಚುರುಕುಗೊಳಿಸಿದೆ. ಈ ಮೂಲಕ ಉತ್ತರ ಕೊರಿಯಾಕ್ಕೆ ದಿಟ್ಟ ಪ್ರತ್ಯುತ್ತರ ನೀಡಿದೆ. ಉತ್ತರ ಕೊರಿಯಾ ತನ್ನ ಪ್ರಚೋದನೆಯ ಅಣ್ವಸ್ತ್ರ ದಾಳಿ ಬೆದರಿಕೆಗೂ ಬಗ್ಗದೆ ತನ್ನ ಬತ್ತಳಿಕೆಯಲ್ಲಿರುವ ಶಸ್ತ್ರಾಸ್ತ್ರಗಳ ಪರೀಕ್ಷೆ ನಡೆಸಿ, ತನ್ನ ಬಲವನ್ನು ಪ್ರದರ್ಶಿಸಿದೆ. ಇದರಿಂದಾಗಿ ಯುದ್ಧದ ಕಾರ್ಮೋಡ ದಟ್ಟವಾಗಿ ಹರಡಿದೆ. ಮುಂದಿನ ಸೆಪ್ಟೆಂಬರ್ 1ರ ವರೆಗೆ ವಾಯುಪಡೆ, ನೌಕಪಡೆ ಮತ್ತು ಭೂಸೇನೆಯ ಯೋಧರು ಸಮರಾಭ್ಯಾಸದಲ್ಲಿ ತೊಡಗಲಿದ್ದಾರೆ. ಹಲವಾರು ಯುದ್ಧ ವಿಮಾನಗಳ ಹಾರಾಟ ಮತ್ತು ಸಮರ ಟ್ಯಾಂಕ್‍ಗಳ […]