ಸಿಬಿಐ, ಇಡಿ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ : ಶಾ

ನವದೆಹಲಿ,ಮಾ.18- ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಪ್ರಕರಣಗಳು ಯುಪಿಎ ಸರ್ಕಾರದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾನ್‍ಕ್ಲೇವ್‍ನಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ತನಿಖಾ ಸಂಸ್ಥೆಗಳು ಏನೇ ಮಾಡಿದರೂ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಮುಂದಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ. ಸಿಬಿಐ ಮತ್ತು ಇಡಿ […]

ಮನೆ ಬಾಗಿಲಿಗೆ ಚಿಕಿತ್ಸೆ, ಪರೀಕ್ಷಾ ಸೌಲಭ್ಯ ತಲುಪಿಸಲು ಸರ್ಕಾರದ ಪ್ರಯತ್ನ: ಮೋದಿ

ನವದೆಹಲಿ,ಮಾ.6- ಭಾರತದ ಆರೋಗ್ಯ ಕ್ಷೇತ್ರ ವಿದೇಶಿ ಅವಲಂಬನೆಯನ್ನು ಹಂತ ಹಂತವಾಗಿ ತಗ್ಗಿಸಲಾಗುತ್ತಿದೆ. ಕೋವಿಡೋತ್ತರದಲ್ಲಿ ಆತ್ಮನಿರ್ಭರ ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ನಂತರದ ವೆಬಿನಾರ್ ಸರಣಿಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನಾ ಕ್ಷೇತ್ರ ಕುರಿತು ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಔಷಧಿಗಳು, ಲಸಿಕೆಗಳು ಮತ್ತು ಜೀವ ರಕ್ಷಕ ವೈದ್ಯಕೀಯ ಸಾಧನಗಳ ಮೂಲಕ ವೈದ್ಯಕೀಯ ಕ್ಷೇತ್ರವನ್ನು ಶಸ್ತ್ರಸಜ್ಜಿತಗೊಳಿಸಲಾಗಿದೆ. ಈ ಮೂಲಕ ತಮ್ಮ ಸರ್ಕಾರ ವಿದೇಶಿ ಅವಲಂಬನೆಯನ್ನು ಕಡಿಮೆ ಮಾಡಲು ಸತತವಾಗಿ […]

ಮೊಬೈಲ್ ಕಳ್ಳನಿಂದ ಎಎಸ್‍ಐ ಕೊಲೆ

ನವದೆಹಲಿ, ಜ .9- ಮೊಬೈಲ್ ಫೋನ್ ಸುಲಿಗೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಹಿಡಿಯಲು ಹೋದ ದೆಹಲಿ ಪೊಲೀಸ್ ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೂಲತ ರಾಜಸ್ಥಾನದ ಸಿಕರ್ ಜಿಲ್ಲೆಯವರಾದ ಎಎಸ್‍ಐ ಶಂಭು ದಯಾಳ್ (57) ಅವರು ಪತ್ನಿ, ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಳೆದ ಬುಧವಾರ ದೆಕಲಿಯ ಮಾಯಾಪುರಿ ಮಹಿಳೆಯೊಬ್ಬರು ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿ ತಮ್ಮ ಪತಿಯ ಮೊಬೈಲ್ […]