ಬೆಮೆಲ್ ಕಾಂತರಾಜು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಜ.21- ತುಮಕೂರು ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಬೆಮೆಲ್ ಕಾಂತರಾಜು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂತರಾಜು ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಕಳೆದ ಬಾರಿ ಸ್ಥಳೀಯ ಸಂಸ್ಥೆಗಳ ತುಮಕೂರು ಕ್ಷೇತ್ರದಿಂದ ಕಾಂತರಾಜು ಜೆಡಿಎಸ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂತರಾಜು ಜೆಡಿಎಸ್ನಿಂದ ದೂರು ಉಳಿದಿದ್ದರು. ಅವರಿಗೆ ಜೆಡಿಎಸ್ ಟಿಕೆಟ್ ಕೂಡ ನಿರಾಕರಿಸಿತ್ತು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ತೋರಿಸಿದ […]