ಬಜೆಟ್‍ನಲ್ಲಿ ಬೆಂಗಳೂರಿಗೆ ಮಹತ್ವದ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಚೊಚ್ಚಲ ಬಜೆಟ್‍ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8409 ಕೋಟಿ ರೂ.ಗಳ ಅನುದಾನ ಒದಗಿಸುವುದರ ಜತೆಗೆ 6 ಲಕ್ಷಕ್ಕೂ ಹೆಚ್ಚು ಬಿ ಸ್ವತ್ತುಗಳಿಗೆ ಎ ಖಾತಾ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಹೆಚ್ಚು ಸ್ವತ್ತುಗಳ ವಿವರಗಳನ್ನು ಬಿ ರಿಜಿಸ್ಟ್ರರ್‍ನಲ್ಲಿ ದಾಖಲಿಸಲಾಗಿದ್ದು, ಸದರಿ ಸ್ವತ್ತುಗಳನ್ನು ಎ ಖಾತೆಗೆ ದಾಖಲಿಸಲು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅನಿಯಮ ಹಾಗೂ ಕರ್ನಾಟಕ ಭೂ ಕಂದಾಯ ಅನಿಯಮಗಳಡಿ ಪರಿಶೀಲಿಸಿ ಸೂಕ್ತ […]