ನೈಜೀರಿಯಾ ಪ್ರಜೆ ಸೇರಿ 35 ಆರೋಪಿಗಳ ಬಂಧನ, 80 ಬೈಕ್ ವಶ
ಬೆಂಗಳೂರು, ಫೆ.3- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು 35 ಮಂದಿ ಆರೋಪಿಗಳನ್ನು ಬಂಧಿಸಿ 35 ಲಕ್ಷ ಮೌಲ್ಯದ ಮಾದಕ ವಸ್ತು, 80 ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ 6 ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆ ನಡೆಸಿ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ 35 ಆರೋಪಿಗಳನ್ನು ಬಂಧಿಸಿ 35 ಲಕ್ಷ ಮೌಲ್ಯದ ಗಾಂಜಾ, ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. […]