ತಂತ್ರಜ್ಞಾನ ಬಳಕೆಯಿಂದ ಭ್ರಷ್ಟಾಚಾರ ಕಡಿಮೆಯಾಗಲಿದೆ : ಮೋದಿ

ಬೆಂಗಳೂರು,ನ.16- ದೇಶಾದ್ಯಂತ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್ನಷ್ಟು ಅಗಾಧ ಮೊತ್ತವನ್ನು ಹೂಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ನ 25ನೇ ಆವೃತ್ತಿಯನ್ನು ವಚ್ರ್ಯುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, , ತಂತ್ರಜ್ಞಾನಕ್ಕೆ ಮಾನವೀಯ ಮತ್ತು ಪ್ರಜಾಸತ್ತಾತ್ಮಕ ಸ್ಪರ್ಶವನ್ನು ನೀಡುತ್ತಲೇ ಇರುವುದು ಭಾರತದ ಅನನ್ಯ ಸಾಧನೆಯಾಗಿದೆ. ಅದರಲ್ಲೂ ತಂತ್ರಜ್ಞಾನವು ನಮಗೆ ಬಡತನದ ವಿರುದ್ಧದ ಹೋರಾಟಕ್ಕೆ ಶಕ್ತಿಶಾಲಿ ಅಸ್ತ್ರವಾಗಿದೆ ಎಂದರು. […]