ಬೆಂಗಳೂರಿಗರಿಗೆ ಆರೋಗ್ಯದ ಕುರಿತು ಬಜೆಟ್‍ನಲ್ಲಿ ಗುಡ್ ನ್ಯೂಸ್

ಬೆಂಗಳೂರು,ಫೆ.17- ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆ ಸುಧಾರಿಸುವ ಉದ್ದೇಶದಿಂದ ಬೆಂಗಳೂರು ಹೆಲ್ತ್ ಸಿಸ್ಟಮ್ ಎಂಬ ವಿನೂತನ ಯೋಜನೆ ಜಾರಿಗೆ ಈ ಬಾರಿ ಬಜೆಟ್‍ನಲ್ಲಿ ಮುನ್ನುಡಿ ಬರೆಯಲಾಗಿದೆ. ನಗರದ ನಾಗರಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ದೊರಕಿಸಿಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಆಧ್ಯತೆಯಾಗಿದ್ದು, ಹೀಗಾಗಿ ಎಲ್ಲ ಆಸ್ಪತ್ರೆಗಳ ನಡುವೆ ಸಮನ್ವಯ ಸಾಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಹೆಲ್ತ್ ಸಿಸ್ಟಮ್ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿದ ಎಂದು ಅವರು ಮಾಹಿತಿ ನೀಡಿದ್ದಾರೆ. 2022-23ನೇ ಸಾಲಿನಲ್ಲಿ 243 ವಾರ್ಡ್‍ಗಳಲ್ಲಿ ನಮ್ಮ ಕ್ಲಿನಿಕ್‍ಗಳು […]