ವರ್ಷಾಂತ್ಯಕ್ಕೆ ಶಾಲಾ ಪಠ್ಯದಲ್ಲಿ ಭಗದ್ಗೀತೆ ಬೋಧನೆ ಸೇರ್ಪಡೆ : ಸಚಿವ ನಾಗೇಶ್
ಬೆಂಗಳೂರು,ಸೆ.19- ಮುಂದಿನ ಡಿಸೆಂಬರ್‍ನಿಂದ ಶಾಲಾ ಪಠ್ಯ ಕ್ರಮದಲ್ಲಿ ನೈತಿಕ ಶಿಕ್ಷಣವನ್ನು ಸೇರ್ಪಡೆ ಮಾಡಲಾಗುತ್ತಿದ್ದು, ಅದರಲ್ಲಿ ಭಗದ್ಗೀತೆ ಬೋಧನೆಯನ್ನು ಸೇರ್ಪಡೆಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಮತ್ತು ಎನ್.ರವಿಕುಮಾರ್ ಅವರ ಜಂಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆಯನ್ನು ಪ್ರತ್ಯೇಕವಾಗಿ ಬೋಧಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯ ಪ್ರಾಣೇಶ್ ಅವರು ಈ ಹಿಂದೆ ನಾವು ಇದೇ […]