ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲು ಸರ್ಕಾರ ಚಿಂತನೆ

ಬೆಂಗಳೂರು, ಆ.3- ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಇನ್ನು ಕಿಚ್ಚು ಹಸಿಯಾಗಿರುವಾಗಲೇ ಸರ್ಕಾರ ಮತ್ತೊಂದು ವಿವಾದಕ್ಕೆ ಕೈ ಹಾಕುವ ಲಕ್ಷಣಗಳಿವೆ. ಈಗಾಗಲೇ ಗುಜರಾತ್‍ನಲ್ಲಿ 6ನೇ ತರಗತಿಯಿಂದ ಪಿಯುಸಿ ಹಂತದವರೆಗೆ ಪಠ್ಯಪುಸ್ತಕದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗಿದೆ. ಈಗ ಕರ್ನಾಟಕದಲ್ಲಿ ಇದೇ ಮಾದರಿಯನ್ನು ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಆರನೇ ತರಗತಿಯಿಂದ ಪಿಯುಸಿವರೆಗೆ ಪಠ್ಯಪುಸ್ತಕಗಳಲ್ಲಿ ಮಕ್ಕಳಿಗೆ ಭಗವದ್ಗೀತೆ, ರಾಮಾಯಣ, ಮಹಾಭಾರತದಲ್ಲಿರುವ ಕೆಲವು ಪ್ರಮುಖ ಅಂಶಗಳನ್ನು ಅಳವಡಿಸಲು ತೀರ್ಮಾನಿಸಲಾಗಿದ್ದು, ಈ ತಿಂಗಳ ಅಂತ್ಯಕ್ಕೆ ರೂಪುರೇಷೆ ಅಂತಿಮಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಪ್ರಾಥಮಿಕ […]