ಮಂಡ್ಯ ಜಿಲ್ಲೆ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ

ಬೆಂಗಳೂರು,ಅ.3- ದೇಶದ ಗಂಭೀರ ಸಮಸ್ಯೆಗಳ ಇತ್ಯರ್ಥಕ್ಕಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಐಕ್ಯತಾ ಯಾತ್ರೆ ಇಂದು ಮಂಡ್ಯ ಜಿಲ್ಲೆಗೆ ಪ್ರವೇಶ ಪಡೆದಿದೆ. ಬೆಳಗ್ಗೆ ಮೈಸೂರಿನ ಹರ್ಡಿಂಗ್ ಸರ್ಕಲ್‍ನ ಆರ್‍ಗೇಟ್ ನಿಂದ ಆರಂಭವಾದ ಪಾದಯಾತ್ರೆ ಶ್ರೀರಂಗಪಟ್ಟಣ ಪ್ರವೇಶಿಸಿತು. ಮಾಜಿ ಸಚಿವ ಚಲುವರಾಯಸ್ವಾಮಿ ಪಾದಯಾತ್ರೆಯನ್ನು ಬರಮಾಡಿಕೊಂಡರು. ಹಾದಿಮಧ್ಯೆ ಮೈಸೂರಿನ ಅಶೋಕ ರಸ್ತೆಯಲ್ಲಿರುವ ಮಜೀದ್ ಇ-ಅಂಜಂ ಮಸೀದಿಗೆ ಮತ್ತು ಸೇಂಟ್ ಫಿಲೋಮಿನಾ ಕ್ಯಾಥೆಡ್ರಲ್ ಚರ್ಚ್‍ಗೆ ನಂತರ ಚಾಮುಂಡೇಶ್ವರಿ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ಕೊಟ್ಟರು. ಸಿದ್ದರಾಮಯ್ಯ , […]