ಸಿಎಂ ಬೊಮ್ಮಾಯಿ ಪುತ್ರನಿಗೂ ಕೊರೋನಾ ಪಾಸಿಟಿವ್

ಬೆಂಗಳೂರು,ಜ.11- ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೆ ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಳಿದ ಸದಸ್ಯರ ವರದಿಯನ್ನು ನಿರೀಕ್ಷಿಸಲಾಗಿದೆ. ಈ ಕುರಿತು ಭರತ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್‍ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ತಿಳಿಸುತ್ತೇನೆ ಎಂದಿದ್ದಾರೆ. ನಿನ್ನೆ ಬಸವರಾಜ ಬೊಮ್ಮಾಯಿ ಅವರು ತಮಗೆ ಕೊರೊನಾ ಸೋಂಕು ತಗುಲಿರುವ […]