ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಬಿಎಸ್ವೈ ಕಿಡಿ

ಬೆಂಗಳೂರು, ಡಿ.17- ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತಾಗಿ ಮಾಡಿರುವ ಟೀಕೆಯು ಅವರ ಕೀಳು ಮನಸ್ಥಿತಿಯನ್ನು ಬಯಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ತಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸು ವಂತಾಗಲು ಭಾರತದ ಪ್ರಧಾನಿಯವರು ನೇತೃತ್ವ ವಹಿಸಬೇಕೆಂದು ವಿಶ್ವದ ಎಲ್ಲಾ ಪ್ರಮುಖ ದೇಶಗಳು […]