ಹರ್ಷ ಕೊಲೆ ಹಿಂದೆ ಸಚಿವ ಈಶ್ವರಪ್ಪ ಕೈವಾಡವಿದೆ : ಬಿ.ಕೆ.ಹರಿಪ್ರಸಾದ್ ಆರೋಪ

ಬೆಂಗಳೂರು,ಫೆ.21- ಶಿವಮೊಗ್ಗದಲ್ಲಿ ಬಜರಂಗದಳದ ಮಾಜಿ ಕಾರ್ಯಕರ್ತನ ಕೊಲೆ ಘಟನೆ ಹಿಂದೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕೈವಾಡ ಇದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.ವಿಧಾನಪರಿಷತ್‍ನ ಕಲಾಪ ಆರಂಭವಾಗುತ್ತಿದ್ದಂತೆ ಬಿ.ಕೆ.ಹರಿಪ್ರಸಾದ್ ಅವರು ಶಿವಮೊಗ್ಗದಲ್ಲಿ ಹರ್ಷ ಅವರ ಕೊಲೆ ಪ್ರಕರಣವನ್ನು ಪ್ರಸ್ತಾಪಿಸಿ, ಘಟನೆಯ ಬಗ್ಗೆ ಹೈಕೋರ್ಟ್‍ನ ನ್ಯಾಯಾಧೀಶರಿಂದ ತನಿಖೆಯಾಗಬೇಕೆಂದು ಒತ್ತಾಯಿಸಿದರು. ನಿನ್ನೆ ರಾತ್ರಿ ಹರ್ಷ ಅವರ ಕೊಲೆಯಾಗಿದೆ. ಎರಡು ವರ್ಷಗಳ ಹಿಂದೆ ಅವರ ತಾಯಿ ತನ್ನ ಮಗ ಬಜರಂಗದಳದಲ್ಲಿ ಸಕ್ರಿಯವಾಗಿಲ್ಲ ಎಂದು ಶಿವಮೊಗ್ಗದ ಜಿಲ್ಲಾ […]