ಹೊಸ ಮುಖಗಳಿಗೆ ಸಚಿವ ಸ್ಥಾನ : 2023ರ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲಾನ್
ಬೆಂಗಳೂರು, ಜ.27- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಶೀಘ್ರದಲ್ಲಿಯೇ ಮೇಜರ್ ಸರ್ಜರಿಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ ಹೊಸಬರಿಗೆ ಸಚಿವಗಿರಿ ನೀಡಲು ಚಿಂತನೆ ನಡೆದಿದೆ. ಕೆಲ ಹಾಲಿ ಸಚಿವರಿಗೆ ಕೊಕ್ ಕೊಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಬಿಜೆಪಿಯೊಳಗಿನ ಸಚಿವಗಿರಿ ಭಿನ್ನಮತ ಶಮನಕ್ಕೆ ಸಕಲ ಸಿದ್ಧತೆ ನಡೆದಿದೆ. 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಹೊಣೆ ಬೊಮ್ಮಾಯಿ ಮೇಲಿದೆ. ಬಿಜೆಪಿಯ ನಿಷ್ಠಾವಂತ ಶಾಸಕರು ಸಚಿವ ಸ್ಥಾನ ಸಿಗದೆ ಒಳಗೊಳಗೆ ಕುದಿಯುತ್ತಿದ್ದಾರೆ. […]