ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿ.ಟಿ. ರವಿ

ಬೆಂಗಳೂರು,ಜ.2- ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ದತೆಯನ್ನು ಪ್ರದರ್ಶಿಸಿದೆ. ಕಾಂಗ್ರೆಸ್ ಪಕ್ಷ ಯಾರ ವಿರುದ್ಧ ಪಾದಯಾತ್ರೆ ನಡೆಸುತ್ತದೆ ಎಂಬುದನ್ನು ಜನತೆಗೆ ತಿಳಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಪಾದಯಾತ್ರೆ ನಡೆಸಲು ಮುಂದಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಆಂತರಿಕ ಗದ್ದುಗೆ ಗುದ್ದಾಟಕ್ಕೆ ಪಾದಯಾತ್ರೆ ನಡೆಸುತ್ತಿರಬಹುದು. ಸುಳ್ಳು ಹೇಳಿಕೊಂಡು ಪಾದಯಾತ್ರೆ ಮಾಡಬೇಡಿ, ಆರೋಗ್ಯ ಸುಧಾರಣೆಗೆ ಬೇಕಾದರೆ ಪಾದಯಾತ್ರೆ ಮಾಡಿ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]