ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಬ್ರೇಕ್..!

ಬೆಂಗಳೂರು,ಫೆ.8- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಪ್ರಕ್ರಿಯೆ ಮುಗಿಯುವವರೆಗೂ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಿಗಮ ಮಂಡಳಿ ನೇಮಕಾತಿ ಸೇರಿದಂತೆ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳದಂತೆ ಹೈಕಮಾಂಡ್ ಬ್ರೇಕ್ ಹಾಕಿದೆ. ದೆಹಲಿ ವರಿಷ್ಠರ ಈ ತೀರ್ಮಾನದಿಂದಾಗಿ ಕೆಲವೇ ದಿನಗಳಲ್ಲಿ ಮಂತ್ರಿಯಾಗುತ್ತೇವೆ ಎಂದು ಮನಸ್ಸಿನಲ್ಲಿ ಮಂಡಕ್ಕಿ ಮೇಯ್ದಿದ್ದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಯಾತ್ರೆ ಫಲ ನೀಡಿಲ್ಲ. ಹೈಕಮಾಂಡ್‍ನ ಈ ನಿಲುವಿನಿಂದ ಸಂಪುಟ ವಿಸ್ತರಣೆ ಮತ್ತಷ್ಟು […]