ಬಿಬಿಎಂಪಿ ಚುನಾವಣೆ, ನಿಗಮ ಮಂಡಳಿ ನೇಮಕ ಕುರಿತು ಬಿಜೆಪಿ ನಾಯಕರ ಸಭೆ

ಬೆಂಗಳೂರು,ಜ.24-ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ, ಸಚಿವ ಸಂಪುಟ ಪುನಾರಚನೆ/ವಿಸ್ತರಣೆ, ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಗಳು ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ನಾಳೆ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಒಟ್ಟು ಮೂರು ದಿನ ನಡೆಯಲಿರುವ ಸರಣಿ ಸಭೆಯಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಲಿದ್ದು, ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಕಾರ್ಯತಂತ್ರ ರೂಪಿಸಲಿದೆ. […]