ಕಾಂಗ್ರೆಸ್ ವಿರುದ್ಧ ಪ್ರತಿತಂತ್ರ ಹೆಣೆಯಲು ನಾಳೆ ಬಿಜೆಪಿ ತುರ್ತು ಸಭೆ
ಬೆಂಗಳೂರು,ಫೆ.20- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಲೆದಂಡಕ್ಕೆ ಪಟ್ಟು ಹಿಡಿದು ಪ್ರತಿಪಕ್ಷ ಕಾಂಗ್ರೆಸ್ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ತುರ್ತು ಸಭೆ ಕರೆದಿದೆ. ಒಂದು ಕಡೆ ಈಶ್ವರಪ್ಪನವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಕಳೆದ ನಾಲ್ಕು ದಿನಗಳಿಂದ ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಪ್ರಮುಖರ ಸಭೆ ನಡೆಸುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ನಾಳೆ ಬೆಳಗ್ಗೆ 7 ಗಂಟೆಗೆ ಪಕ್ಷದ ಕಚೇರಿಯಲ್ಲಿ ಮುಖ್ಯಮಂತ್ರಿ […]