ಅದು ಪಾದಯಾತ್ರೆ ಅಲ್ಲ ಮೋಜು-ಮಸ್ತಿಯ ಯಾತ್ರೆ : ಯತ್ನಾಳ್ ಟೀಕೆ

ವಿಜಯಪುರ, ಮಾ.1- ಕಾಂಗ್ರೆಸ್ ಪಾದಯಾತ್ರೆ ಮೋಜು-ಮಸ್ತಿನ ಯಾತ್ರೆಯಾಗಿದೆ. ಬೂರಿ ಭೋಜನ ಸವಿದು ಕುಣಿದು ಕುಪ್ಪಳಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ಸುಂದರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಯ ಗಂಭೀರತೆಯನ್ನೇ ಕಾಂಗ್ರೆಸ್ ಹಾಳು ಮಾಡಿದೆ ಎಂದು ವ್ಯಂಗ್ಯವಾಡಿದ್ದಾರೆ. ಚುನಾವಣೆ ಘೋಷಣೆಯಾದರೆ ನಡೆಯಲಾಗದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಪಾದಯಾತ್ರೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಮೇಕೆದಾಟು ಯೋಜನೆಗೆ […]