ಗಡಿ ವಿವಾದ: ಏಕಪಕ್ಷೀಯ ನಿರ್ಧಾರ ಬೇಡ ಕೇಂದ್ರಕ್ಕೆ ಸಂಸದರ ನಿಯೋಗ ಆಗ್ರಹ

ಬೆಂಗಳೂರು,ಡಿ.12- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಉಂಟಾಗಿರುವ ಗಡಿ ವಿವಾದಲ್ಲಿ ತಕ್ಷಣವೇ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಾರದೆಂದು ಬಿಜೆಪಿ ಒತ್ತಾಯಿಸಲಿದೆ. ಇಂದು ಸಂಜೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲಿರುವ ರಾಜ್ಯ ಸಂಸದರ ನಿಯೋಗ, ವಿವಾದ ಸುಪ್ರೀಂಕೋರ್ಟ್‍ನಲ್ಲಿ ಇರುವ ಕಾರಣ ಅಲ್ಲಿಯವರೆಗೂ ತಟಸ್ಥ ನೀತಿ ಅನುಸರಿಸಬೇಕೆಂದು ಮನವಿ ಮಾಡಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಸಂಸದರಾದ ಡಿ.ವಿ.ಸದಾನಂದಗೌಡ, ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಬಿ.ವೈ.ರಾಘವೇಂದ್ರ, […]