ಕಾಂಗ್ರೆಸ್ ‘ಮೇಕೆದಾಟು ಪಾದಯಾತ್ರೆ’ಗೆ ಕೌಂಟರ್ ನೀಡಲು ಬಿಜೆಪಿಯಿಂದ ಪ್ಲಾನ್ ಎ, ಬಿ ರೆಡಿ..!

ಬೆಂಗಳೂರು,ಜ.5- ಮೇಕೆದಾಟು ಯೋಜನೆಗೆ ಆಗ್ರಹಿಸಿ 10 ದಿನಗಳ ಪಾದಯಾತ್ರೆಗೆ ಕಾಂಗ್ರೆಸ್ ಪಡೆ ಮುಂದಾಗಿದೆ. ಈ ಪಾದಯಾತ್ರೆಗೆ ಪ್ರತಿ ಹೆಜ್ಜೆಗೂ ಕೌಂಟರ್ ನೀಡಲು ಬಿಜೆಪಿ ಪ್ರತಿತಂತ್ರ ರೂಪಿಸುತ್ತಿದೆ.ಜನವರಿ 9 ರಿಂದ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಆರಂಭಿಸುತ್ತಿದೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಹೊಗೇನಕಲ್‍ನಿಂದ ಬೆಂಗಳೂರುವರೆಗೆ 10 ದಿನಗಳ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದೆ. ಪಾದಯಾತ್ರೆಯುದ್ದಕ್ಕೂ ರಾಜ್ಯ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಸಂದೇಶವನ್ನು ರಾಜ್ಯದ ಜನತೆಗೆ ತಲುಪಿಸಲು ಕಾಂಗ್ರೆಸ್ ತಂತ್ರ ರೂಪಿಸಿದೆ.ಕಳೆದ […]