ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರುತ್ತೆ : ಸಿಎಂ ದೃಢ ವಿಶ್ವಾಸ

ಬೆಂಗಳೂರು,ಡಿ.6- ಗುಜರಾತ್ ಮತ್ತು ಹಿಮಾಚಲಪ್ರದೇಶ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೂ ಬೀರಲಿದ್ದು, 2023ರ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಎರಡೂ ರಾಜ್ಯಗಳ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರುವುದರಲ್ಲೂ ಯಾವುದೇ ಅನುಮಾನವಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 100ಕ್ಕೂ 100ರಷ್ಟು ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ದೃಢ ವಿಶ್ವಾಸವನ್ನು ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅಭಿವೃದ್ಧಿ ಕಾರ್ಯವನ್ನು ಬೆಂಬಲಿಸಲಿದ್ದಾರೆ ಎಂಬುದಕ್ಕೆ ಚುನಾವಣೋತ್ತರ ಮತಗಟ್ಟೆ ಫಲಿತಾಂಶವೇ […]